ಬೆಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು(ಕ್ರೀಡಾ ಜ್ಯೋತಿ) ಸ್ವಾಗತಿಸಿದರು.
ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್ ಎಸ್ ಎಸ್ ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್ ಎಸ್ ಎಸ್ ಜಂಟಿಯಾಗಿ ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಿದ್ದ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇ ಸ್ವಾಗತ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರು ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು, 44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಗೆ ಕರ್ನಾಟಕದಲ್ಲಿ ಸ್ವಾಗತ ಕೋರುತ್ತೇನೆ ಎಂದರು.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜ್, ಡಾ. ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯುಕ್ತ ಡಾ. ಗೋಪಾಲಕೃಷ್ಣ, ನೆಹರು ಯುವ ಕೇಂದ್ರ ಸಂಘಟನೆಯ ದಕ್ಷಿಣ ವಲಯದ ಪ್ರಾದೇಶಿಕ ನಿರ್ದೇಶಕರಾದ ಎಂ.ಎನ್. ನಟರಾಜ್, ಕರ್ನಾಟಕ ರಾಜ್ಯದ ಎನ್‍ಎಸ್‍ಎಸ್ ಅಕಾರಿ ಪ್ರತಾಪ್ ಲಿಂಗಯ್ಯ , ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್‍ನ ಅಧ್ಯಕ್ಷ, ಡಿಪಿ ಅನಂತ. ಮಾಸ್ಟರ್ ಸ್ಟೆನಿ, ತೇಜ್ ಕುಮಾರ್ ಮತ್ತು ಗಿರೀಶ್ ಕೌಶಿಕ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

