Sunday, September 8, 2024

Latest Posts

ಸರ್ಕಾರದ ನಿರ್ಧಾರ ಪ್ರಶ್ನಿಸಿದ ಬಾಲಕ..!

- Advertisement -

www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ.

ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು ಅಳವಡಿಕೆ ಮಾಡಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದಾನೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ 3 ವಾರಗಳ ಬಳಿಕ ಈ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.

- Advertisement -

Latest Posts

Don't Miss