- Advertisement -
ಪಾಕಿಸ್ತಾನ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, 20 ಮಂದಿ ಸಾವನ್ನಪ್ಪಿ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಇವ್ವಿನ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಮುಂಜಾನಾ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. 5.6ರಷ್ಟು ತೀವ್ರತೆ ಭೂಕಂಪ ದಾಖಲಾಗಿದ್ದು, ಕ್ವೆಟ್ಟಾ, ಸಿಬಿ ಹರ್ನಾಯ್, ಪಿಶಿನ್, ಕ್ವಿಲಾ ಸೈಫುಲ್ಲಾ, ಚಮನ್, ಜೈರಾತ್ ಮತ್ತು ಜೂಬ್ ಪ್ರದೇಶದಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಇನ್ನು ಸಾವನ್ನಪ್ಪಿದವರ ಪೈಕಿ ಅತಿ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಅಂತ ಪ್ರಾಂತೀಯ ವಿಪತ್ತು ನಿರ್ವಹಣಾ ಮಂಡಳಿ ಮಾಹಿತಿ ನೀಡಿದೆ. ಸುಮಾರು 100ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ನೂರಾರು ಮಂದಿ ಸೂರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಇನ್ನು ಭೂಕಂಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಭರದಿಂದ ಸಾಗಿದೆ.
- Advertisement -