Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ“ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮಂಜೇಗೌಡ ಸಾವನ್ನಪ್ಪಿದ್ದಾರೆ.
ರೈತನ ಮೃತ ದೇಹವನ್ನು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ವಶವನ್ನು ವಿಕ್ಷಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿರುವ ಸಚಿವರು ತಾವು ಮೃತ ರೈತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಅಲ್ಲದೇ ಸಿಎಂ ಬಳಿ ಚರ್ಚಿಸಿ ಇನ್ನೂ ಹೆಚ್ಚಿನ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಮೃತ ರೈತನ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಸೇರದಿದ್ದರೆ. ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಷ್ಟೇ ಪರಿಹಾರ ನೀಡಿದರೂ ಮೃತ ರೈತನ ಜೀವ ಮತ್ತೆ ಬಂದಿತೇ ಅನ್ನೋದು ಮಾತ್ರ ಜನರ ಪ್ರಶ್ನೆ.

