ಟ್ಯಾಂಕರ್ ವಾಹನದಲ್ಲಿ 50 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್‌ಗಳು ಪತ್ತೆ

Hubballi News: ಹುಬ್ಬಳ್ಳಿ: ಟ್ಯಾಂಕರ್ ವಾಹನದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್ ಗಳನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಧಾರವಾಡದ ನರೇಂದ್ರ ಟೋಲ್ ಬಳಿ ನಡೆದಿದೆ.

ಇಲ್ಲಿನ ಟೋಲ್ ಬಳಿಯಲ್ಲಿ ಟ್ಯಾಂಕರ್ ವಾಹನ ಪರಿಶೀಲನೆ ನಡೆಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿ.ಎಸ್.ಟಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ನಕಲಿ ಜಿ.ಎಸ್.ಟಿ ಹಾಗೂ ನಕಲಿ ಆಯಿಲ್‌ ಟ್ಯಾಂಕರ್ ಸೃಷ್ಟಿ ಮಾಡಿದ್ದು ಬೆಳಕಿಗೆ ಬಂದಿತ್ತು. ಈ ವೇಳೆ ವಾಹನ ಚಾಲಕ ಪರಾರಿಯಾಗಿದ್ದು, ಸಂಶಯಗೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸುಮಾರು 50 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್‌ಗಳು ಪತ್ತೆಯಾಗಿದೆ.

ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್ ವಾಹನ ಹಾಗೂ 50 ಲಕ್ಷ ರೂ.ಮೌಲ್ಯದ ಮದ್ಯದ ಬಾಟಲಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾದ ವಿಜಯಕುಮಾರ್ ಸನದಿ, ಉಪ ಆಯುಕ್ತರಾದ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

‘ಪ್ರಧಾನಿಯ ಗಾಢ ನಿದ್ರೆ, ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ’

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

About The Author