Thursday, October 16, 2025

Latest Posts

ಚನ್ನರಾಯಪಟ್ಟಣ ರಾಘವೇಂದ್ರ ಸ್ವಾಮಿ ಮಠದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ..

- Advertisement -

ಹಾಸನ : ಚನ್ನರಾಯಪಟ್ಟಣ  ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ  ಸ್ವಾತಿ ಭಾರದ್ವಾಜ್ ಹೇಳಿದರು.

ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ..

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು ನ.13 ರಂದು ಬೆಳಿಗ್ಗೆ 8 ರಿಂದ ರಾತ್ರಿ 11 ರ ವರೆಗೆ ಸತತ 15 ಗಂಟೆಗಳ ಕಾಲ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ 8 ವಿಧದ ಶಾಸ್ತ್ರೀಯ ನೃತ್ಯಗಳನ್ನು ಪ್ರದರ್ಶಿಸಲಿದ್ದೆವೆ ಎಂದರು.

70ರ ವೃದ್ದೆಯ ಮೇಲೆ ಯುವಕನಿಂದ ಅತ್ಯಾಚಾರ

ದೇಶದ ವಿವಿಧ ಭಾಗಗಳಿಂದ 5 ರಿಂದ 70  ವರ್ಷದ ವಯಸ್ಸಿನ ಸುಮಾರು 300 ಕ್ಕೂ ಹೆಚ್ಚು ಪ್ರತಿಭಾವಂತ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತಮ್ಮ ಪ್ರತಿಭೆ ಪ್ರದರ್ಶನ ಮಾಡಲಿದ್ದಾರೆ, ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿಯ  ರಾಜ್ಯ ಸಂಚಾಲಕ ಪಣೀಷ್, ಅಧ್ಯಕ್ಷೆ ಅನಿತಾ, ರಾಷ್ಟ್ರೀಯ ಸಂಚಾಲಕ ಪ್ರಕಾಶ್  ಇತರರು ಇದ್ದರು.

- Advertisement -

Latest Posts

Don't Miss