- Advertisement -
www.karnatakatv.net: ಬೆಳಗಾವಿ: ಸಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳು ಸಿದ್ಧತೆ ನಡೆಸಿವೆ, ಆಯಾ ಪಕ್ಷದ ಚಿಹ್ನೆಗಳ ಆಧಾರದ ಮೇಲೆ ಚುನಾವಣೆ ನಡೆಸಲಾಗುತ್ತಿದೆ. ಹಾಗೂ ನಿನ್ನೆ ನಾಮಪತ್ರ ಸಲ್ಲಿಕೆ ಕೂಡಾ ಅಂತ್ಯಗೊಂಡಿದೆ.
ನಾಮಪತ್ರ ಸಲ್ಲಿಕೆ ಆರಂಭಗೊಂಡ ಆ.16ರಿಂದ ಇಂದಿನವರೆಗೆ ಒಟ್ಟು 519 ನಾಮಪತ್ರಗಳು ಸ್ವೀಕೃತಗೊಂಡಿದ್ದು, ನಿನ್ನೆ ಒಟ್ಟು 434 ನಾಮಪತ್ರ ಸಲ್ಲಿಕೆಯಾಗಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಇತರ ಕೆಲ ಪ್ರಾದೇಶಿಕ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.
ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕೈ-ಕಮಲ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದು, ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇನ್ನು 3 ದಿನಗಳ ಕಾಲ ಸಮಯಾವಕಾಶವಿದೆ.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ
- Advertisement -