- Advertisement -
ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಅಲ್ಲದೆ ಇಬ್ಬರು ಕಾರ್ಮಿಕರಿಗೆ ತೀವ್ರವಾಗಿ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಮಳೆಯ ಕೊರತೆ ಎಷ್ಟಿದೆ ಗೊತ್ತಾ..? ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -