Monday, November 17, 2025

Latest Posts

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

- Advertisement -

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ.

60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಮೀಶನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ಘನ ಸನ್ನಿಧಾನಕ್ಕೆ ಹಾಗೂ ಮಾನ್ಯ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ..? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರನನ್ನು ರಕ್ಷಿಸಿ. 60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್ ಎಂದು ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

- Advertisement -

Latest Posts

Don't Miss