Saturday, July 27, 2024

Latest Posts

ಕಲುಷಿತ ನೀರು ಸೇವನೆಯಿಂದ 60 ಜನ ಅಸ್ವಸ್ಥ..!

- Advertisement -

www.karnatakatv.net : ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ದಸ್ತಾಪುರ ಗ್ರಾಮದಲ್ಲಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ ಮತ್ತು ಇಬ್ಬರು ಮೃತಪಟ್ಟಿದ್ದಾರೆ. ಕಳೆದ 15 ದಿನಗಳಿಂದ ವಾಂತಿ ಭೇದಿ ಉಲ್ಬಣಗೊಂಡಿದೆ. ಮಕ್ಕಳು ಮತ್ತು ಮಹಿಳೆಯರಿ ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಕಮಲಾಪೂರ ಸರಕಾರಿ ಆಸ್ಪತ್ರೆ, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶುದ್ಧ ಕುಡಿಯುವ ನೀರು ನೀಡದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಮೃತರು ಕೆಲವು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದು, ಅವರು ಮೃತಪಟ್ಟಿರೊದಕ್ಕೆ ಗ್ರಾಮಸ್ಥರು ಅಗ್ರಹಿಸಿದ್ದಾರೆ. ಆದ್ರೆ ವೈದ್ಯರು ಕಾಲರಾಗಳಿಂದ ಮೃತಪಟ್ಟಿರುವುದಾಗಿ ಶಂಕಿಸಿದ್ದಾರೆ, ಇದರ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ದೃಢಪಡಿಸಿಲ್ಲ ಎಂದು ತಿಳಿಸಿದ್ದಾರೆ.

- Advertisement -

Latest Posts

Don't Miss