Political News: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಇಂದು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಇದ್ದಾಗ, ಶಾಲೆಗೆ ಕಳಿಸಬೇಡಿ. ಕೊರೋನಾ ಉಪತಳಿ ಜೆಎನ್.1 ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರ ವಹಿಸಬೇಕು. ಮಕ್ಕಳಲ್ಲಿ ವೇಗವಾಗಿ ರೋಗ ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ. ಮನೆಯಲ್ಲೇ ಸೂಕ್ತ ಆರೈಕೆ ಮಾಡಿ ಎಂದಿದ್ದಾರೆ.
ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ಯಾವುದೇ ನಿರ್ಬಂಧ ಹೇರುವುದಿಲ್ಲ. ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ. ಸಾರ್ವಜನಿಕರು ಜೆಎನ್.1 ಕುರಿತು ಆತಂಕಪಡುವ ಅಗತ್ಯವಿಲ್ಲ. ಇದು ಅಪಾಯಕಾರಿಯಲ್ಲ. ಆದರೆ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ..
ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ
‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’




