www.karnatakatv.net: ಅಮೃತ ಕ್ರೀಡಾ ದತ್ತು ಯೋಜನೆಗೆ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮುಂದಿನ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಿ ಹೆಚ್ಚಿನ ಪದಕ ಗೆಲ್ಲಲು ಅನುವಾಗುವ ನಿಟ್ಟಿನಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವ್ಯಾಪ್ತಿಯಲ್ಲಿ ಅಮೃತ ಕ್ರೀಡಾದತ್ತು ಯೋಜನೆಯನ್ನು ಸ್ವಾತಂತ್ರೋತ್ಸವದ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡರ ಅಧ್ಯಕ್ಷತೆಯ ಉನ್ನಾತಾಕಾರ ಸಮಿತಿಯು ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಪ್ರತಿಭಾನ್ವಿತ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿದೆ.
ಇದರೋಂದಿಗೆ 20 ಕಾಯ್ದಿರಿಸಿದ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಟೋಕಿಯೋ ಒಲಂಪಿಕ್, ಕಾಮನ್ ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ 75 ಕ್ರೀಡಾಪಟುಗಳನ್ನು ಅಮೃತ ಕ್ರೀಡಾ ದತ್ತು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಮುಂದೆ ಬಂದಿವೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದಾರೆ. ಗಾಲ್ – 1, ಸ್ವಿಮ್ಮಿಂಗ್ -5, ಅಥ್ಲೆಟಿಕ್ಸ್- 12, ಪ್ಯಾರಾ ಅಥ್ಲೆಟಿಕ್ಸ್- 3, ಸೈಕ್ಲಿಂಗ್- 8, ಬ್ಯಾಸ್ಕೆ ಬಾಲ್- 7, ಕುಸ್ತಿ- 4, ಟೆನ್ನಿಸ್-3, ಟೇಬಲ್ ಟೆನ್ನಿಸ್-2, ಹಾಕಿ- 5, ಬ್ಯಾಡ್ಮಿಂಟನ್- 9 ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸ್ರ‍್ಪಸುವ 75 ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ.