Saturday, October 19, 2024

Latest Posts

750 ಕೋಟಿ ಅಕ್ರಮ ಆಸ್ತಿ ಪತ್ತೆ..!

- Advertisement -

www.karnatakatv.net: ಬಿ ಎಸ್ ವೈ ಅವರ ಆಪ್ತರ ಮನೆಯ ಮೇಲೆ ಐಟಿ ದಾಳಿ ನಡೆಸಿ 750 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟನೆ ನೀಡಿದ್ದಾರೆ.

ಹೌದು.. ಅ.7 ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆಸಿ. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ. 8.67 ಕೋಟಿ ಮೊತ್ತದ ಚಿನ್ನ, 29.82 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3 ಕಂಪನಿಗಳು ನಕಲಿಯಾಗಿ ಖರೀದಿ ಮಾಡಿ ಕೆಲಸ ಮಾಡಿದ್ದಾಗಿ ದಾಖಲೆಗಳನ್ನು ಸೃಷ್ಟಿ ಮಾಡಿ ಲಾಭ ಗಳಿಸುರುವುದು ಪತ್ತೆಯಾಗಿದ್ದು, ನಕಲಿಯಾಗಿ ಕಾರ್ಮಿಕ ವೆಚ್ಚ, ನಕಲಿಯಾಗಿ ಬೋಗಸ್ ಸಬ್ ಕಂಟ್ರಾಕ್ಟ್ ಗಳು ಮಾಡಿ ಒಂದು ಕಂಪನಿಗೆ ಸಂಬಂಧಿಸಿದoತೆ ಇಲ್ಲದ 40 ವ್ಯಕ್ತಿಗಳ ಹೆಸರಲ್ಲಿ ಸಬ್ ಕಾಂಟ್ರಾಕ್ಟ್ ವೆಚ್ಚ ಸೃಷ್ಟಿ ಮಾಡಿರುವುದು ಜತೆಗೆ ವಿಚಾರಣೆ ವೇಳೆ ನಕಲಿಯಾಗಿ ದಾಖಲೆಗಳನ್ನು ಸೃಷ್ಟಿ ಮಾಡಿರುವುದಾಗಿ ಐಟಿ ಇಲಾಖೆಯ ಅಧಿಕಾರಿಗಳ ಮುಂದೆ ಸಬ್ ಕಾಂಟ್ರಾಕ್ಟರ್ಗಳು ಒಪ್ಪಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಹಾಗೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.

- Advertisement -

Latest Posts

Don't Miss