www.karnatakatv.net: ಸತತವಾಗಿ 7 ನೇ ದಿನವು ಏರಿಕೆಯಾದ ಇಂಧನ ಬೆಲೆ 100 ಗಡಿ ದಾಟಿ ಮುನ್ನುಗ್ಗುತ್ತಿದೆ. 35-40 ಪೈಸೆ ಪ್ರತಿ ಲೀಟರ್ ನಂತೆ ಇಂಧನ ದರದಲ್ಲಿ ಏರಿಕೆ ಕಾಣುತ್ತಿದೆ.
ಪ್ರತಿನಿತ್ಯ ಇಂಧನ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ದಿನೇ ದಿನೇ ಗಾಯದ ಮೇಲೆ ಬರೆ ಏಳೆದಂತಾಗಿದೆ. ಇಂದು ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಪೆಟ್ರೋಲ್ ದರ ಪ್ರತಿ ಲೀಟರ್ 35 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ 36 ಪೈಸೆ ಹೆಚ್ಚಳವಾಗಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಹಾಗೇ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.