Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ,
ಜನವರಿ ೬ ಹಾಗೂ ೭ ರಂದು ಸಂಜೆ ೪.೩೦ ಕ್ಕೆ ರೈಲ್ವೆ ಸ್ಟೇಷನ್ ಬಳಿಯ ಚನ್ನಗಿರಿವಿರೂಪಾಕ್ಷಪ್ಪ ಕಲ್ಯಾಣಮಂಟಪದಲ್ಲಿ ಪ್ರತಿನಿಧಿ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾಜ ಸೇವಕರಾದ ರೂಪಾ ಹಾಸನ್ ಅವರು ಸಮ್ಮೇಳನದ ಉದ್ಘಾಟನೆ ನೆರವೇರಿಸಲಿದ್ದು, ಪ್ರೊ. ಅನುರಾಧ ಪಿ. ಇವರ ಅಧ್ಯಕ್ಷತೆಯಲ್ಲಿ ಸಮ್ಮೇಳನದಲ್ಲಿ ಜರುಗಲಿದೆ ಎಂದರು.
ಮಹಿಳೆಯರ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಬೇಕು, ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ, ದುಡಿಯುವ ಮಹಿಳೆಯರಿಗೆ ಕನಿಷ್ಠ ವೇತನ, ಸೇವಾ ಭದ್ರತೆಯನ್ನು ಖಾತ್ರಿಪಡಿಸಬೇಕು ಸೇರಿದಂತೆ ಮೊದಲಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಕ್ಕೋತ್ತಾಯ ಮಾಡಲಾಗುವುದು ಎಂದರು.
ಮಹಿಳಾ ವಿಮುಕ್ತಿಯ ಅಂತಿಮ ಗುರಿಗಳಾದ ಸ್ವಾತಂತ್ರ್ಯ ಸಮಾನತೆಯನ್ನು ಗಳಿಸಲು ಸಮಾಜದ ಮೂಲಭೂತ ಬದಲಾವಣೆಯನ್ನು ಪೂರೈಸಿ ನವಸಮಾಜದ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನದ ಬಹಿರಂಗ ಸಭೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಲಿದ್ದಾರೆಂದರು. ಪತ್ರಿಕಾಗೋಷ್ಠಿಯಲ್ಲಿ ಗಂಗೂಬಾಯಿ ಕೋಕರೆ, ದೇವಮ್ಮಾ, ಮಧುಲತಾ ಗೋಕಾಕ್ ಉಪಸ್ಥಿತರಿದ್ದರು.
‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’
‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’