ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರದಲ್ಲಿ ಮೊದಲ ಮಳೆಯೊಂದಿಗೆ ವಾತಾವರಣ ತೀವ್ರಗೊಂಡಿದ್ದು, ಈ ಸಂದರ್ಭದಲ್ಲಿ ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆ ಕುಸಿದು 10 ಕ್ಕೂ ಸಾವು ಸಂಭವಿಸಿವೆ. ಈ ದುರ್ಘಟನೆಯಲ್ಲಿ ಬೀದಿ ಬದಿಯ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿ ಮೂವರು ಮಕ್ಕಳು ಗೋಡೆಯ ಅಡಿ ಸಿಲುಕಿ ಒಟ್ಟು 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಆಸ್ಪತ್ರೆ ಆವರಣದಲ್ಲಿ ಇದ್ದ ಹಳೆಯ ಮತ್ತು ದುರ್ಬಲ ಗೋಡೆ ಮಳೆಯ ಪರಿಣಾಮದಿಂದ ಕುಸಿದಿದೆ. ಗೋಡೆಯ ಅವಶೇಷಗಳಡಿ ಸಿಲುಕಿದವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಕೆಲವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿವೆ.

ಮೃತದೇಹಗಳನ್ನು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಈ ದುರ್ಘಟನೆ ಸಂಬಂಧ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಗೋಡೆ ಕುಸಿತದ ನಿಖರ ಕಾರಣಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

ಮೊದಲ ಮಳೆಯಲ್ಲೇ ಸಂಭವಿಸಿದ ಈ ದುರಂತ ಬೆಂಗಳೂರು ನಗರವನ್ನು ಶೋಕಸಾಗರದಲ್ಲಿ ಮುಳುಗಿಸಿದ್ದು, ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳು ಎದ್ದಿವೆ.

About The Author