ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಭಾರೀ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾರೆ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕೆ ಮಾಡ್ತಿದ್ದ ಕಾಂಗ್ರೆಸ್ಗೆ ಅಶೋಕ್ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ 80 ಶೇಕಡಕ್ಕೆ ಏರಿದ್ದು, ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಬಾರಿ ಇದೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್, ಗುತ್ತಿಗೆದಾರರು ಬರೆದ ಪತ್ರ ಇಡ್ಕೊಂಡು ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ರು. ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ದುಪ್ಪಟ್ಟು ಅಂದ್ರೆ 80 ಪರ್ಸೆಂಟ್ ಕಮಿಷನ್ ಆಗಿದೆ. ಕಮಿಷನ್ ದರ 80% ಗೆ ಏರಿದೆ ಅಂತ ವಾಗ್ದಾಳಿ ನಡೆಸಿದ್ದಾರೆ.
ರೆಡ್ ಹ್ಯಾಂಡ್ ಆಗಿ ಲಂಚ ಹೊಡೆಯುತ್ತಿದ್ದೀರಿ ಎಂಬುದು ಸಾಬೀತಾಗಿದೆ. ಈ ಸರ್ಕಾರದ ಮಾನ-ಮರ್ಯಾದೆ ಈಗ ಸಂಪೂರ್ಣವಾಗಿ ನಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರಕ್ಕೆ ಬರುವ ಯೋಗ್ಯತೆ ಇಲ್ಲ. ತಕ್ಷಣ ರಾಜೀನಾಮೆ ನೀಡಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗಮೋಹನ್ ದಾಸ್ ಕೊಟ್ಟಿದ್ದ ಸೌಲಭ್ಯಗಳನ್ನು ಈಗ ಸರ್ಕಾರ ತೆಗೆದುಕೊಂಡಿದೆ. ಕಾಂಗ್ರೆಸ್ ಮೇಲೆ ನಿರಂತರ ಭ್ರಷ್ಟಾಚಾರದ ಆರೋಪ ಬರುತ್ತಿದೆ. ಗುತ್ತಿಗೆದಾರರ ಪತ್ರವನ್ನು ಗಮನಿಸಿ, ಡಿಕೆ ಶಿವಕುಮಾರ್ ಅವರೇ ನಾಚಿಕೆ ಅನುಭವಿಸುತ್ತಿದ್ದಾರೆ. ಈಗ ರಾಹುಲ್ ಗಾಂಧಿಯೇ ಸ್ಪಷ್ಟ ಉತ್ತರ ನೀಡಬೇಕು ಎಂದು ಆರ್ ಅಶೋಕ್ ಒತ್ತಾಯಿಸಿದರು.
ವರದಿ : ಲಾವಣ್ಯ ಅನಿಗೋಳ




