ಹುಬ್ಬಳ್ಳಿ: ಸೋಮವಾರ ಮಧ್ಯರಾತ್ರಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್‌ನಲ್ಲಿ ನಡೆದಿದೆ. ಅಲ್ಲದೇ 24 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಕೊಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದಿದೆ.
ಲಾರಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. 24 ಮಂದಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.




