ಧಾರವಾಡ: ನಿಶ್ಚಿತಾರ್ಥ ಮುಗಿಸಿ, ಕ್ರೂಸರ್ ನಲ್ಲಿ ವಾಪಾಸ್ ಆಗುತ್ತಿದ್ದಂತ ವೇಳೆ, ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಕ್ರೂಸರ್ ಡಿಕ್ಕಿಯಾದ ಪರಿಣಾಮ, 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ 9 ಮಂದಿ ಸಾವನ್ನಪ್ಪಿರೋ ಘಟನೆ ಧಾರವಾಡದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಜನರು, ಮನ್ಸೂರು ಗ್ರಾಮದಲ್ಲಿನ ನಿಶ್ಚಿತಾರ್ಥಕೆ ತೆರಳಿ, ವಾಪಾಸ್ ಆಗುತ್ತಿದ್ದರು. ರಾತ್ರಿ 1.30 ರಿಂದ 2 ಗಂಟೆಯ ಸಂದರ್ಭದಲ್ಲಿ ಬಾಡ ಗ್ರಾಮದ ಬಳಿಯಲ್ಲಿ, ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.
ಈ ಘಟನೆಯಲ್ಲಿ ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20), ಮಹೇಶ್ವರಯ್ಯ (11) ಮತ್ತು ಶಂಭುಲಿಂಗಯ್ಯ (35 ) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಆಸ್ಪತ್ರೆಗೆ ದಾಖಲಾದ ನಂತ್ರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕ್ರೂಸರ್ ನಲ್ಲಿ 13 ಜನರಿದ್ದರು ಎಂದು ತಿಳಿದು ಬಂದಿದೆ.




