Thursday, May 1, 2025

Latest Posts

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

- Advertisement -

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕರೆ ನೀಡಿದ್ದಾರೆ. ಶಾಲೆಗಳ ಪುನರಾರಂಭವನ್ನು ನ.2 ರಂದು ಪರಿಶೀಲನೆ ಮಾಡಲಾಗಿದೆ. ಶೇ.92 ರಷ್ಟು ಬೋಧಕ ಸಿಬ್ಬಂದಿಗಳಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಶಿಕ್ಷಣ ಸಂಸ್ಥೆಗಳ ಬೋಧಕ ಸಿಬ್ಬಂದಿಗಳ ಪೈಕಿ ಶೇ.96 ರಷ್ಟು ಮಂದಿಗೆ ಲಸಿಕೆ ನೀಡಲಾಗಿದ್ದರೆ, ಶೇ.86 ರಷ್ಟು ಬೋಧಕೇತರ ಸಿಬ್ಬಂದಿಗಳು ಲಸಿಕೆ ಪಡೆದಿದ್ದಾರೆ ಎಂದು ತಿಳಿಸಲಾಗಿದೆ.

- Advertisement -

Latest Posts

Don't Miss