ಬೀದರ್ ಜಿಲ್ಲೆ (Bidar District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 94 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಜನವರಿ 31ರವರೆಗೆ ಅರ್ಜಿ ಹಾಕಬಹುದು. ಜನವರಿ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

