Wednesday, October 15, 2025

Latest Posts

ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರು ಆಗ್ತಿದ್ದಾರೆ: ಬಸವರಾಜ ಬೊಮ್ಮಾಯಿ

- Advertisement -

Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ ಅವಕಾಶ ಇದೆ. ಆ ನಿಟ್ಟಿನಲ್ಲಿ ಸತತ, ನಿರಂತರ ಪ್ರಯತ್ನ ಮಾಡ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ. ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರೋದು ಕರ್ನಾಟಕದ ದೌರ್ಭಾಗ್ಯ. ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಹಾಗೂ ಬಿ ವೈ ವಿಜಯೇಂದ್ರ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬೇರೆ ಯಾವುದೇ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ ಬಹಳ ಸ್ಪಷ್ಟವಾಗಿದೆ, ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ ಎಂದಿದ್ದಾರೆ.

ದಸರಾ ನಂತರ ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ವಿಜಯೇಂದ್ರ ಅವರ ಲೆಕ್ಕಾಚಾರದಲ್ಲಿ ಹೇಳಿದ್ದಾರೆ. ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರು ಆಗ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಜಾತಿಗಣತಿ ವಿಷಯವಾಗಿ ಬಿಕೆ ಹರಿಪ್ರಸಾದ್ ಮನದಾಳದ ಮಾತು ಹೇಳಿದ್ದಾರೆ‌. ಜಾತಿಗಣತಿ ಮುಖ್ಯನೋ ಸರ್ಕಾರ ಬೀಳೋದು ಮುಖ್ಯವೋ ಅನ್ನೊದನ್ನ ಬಿಕೆ ಹರಿಪ್ರಸಾದ್ ಸ್ಪಷ್ಟ ಪಡಿಸಲಿ. ಜಾತಿಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು. ನಿಖರವಾಗಿ ಜಾತಿಗಣತಿಯ ಆದೇಶವಿಲ್ಲ. ಕಾಂತರಾಜ್ ಅಮಿಟಿ ಕೊಟ್ಟ ವರದಿ ಸ್ವೀಕರಸಿಲ್ಲ.. ಯಾಕೆ..? ಜಯಪ್ರಕಾಶ್ ಹೆಗಡೆ 2-3 ತಿಂಗಳಲ್ಲಿ ಹೇಗೆ ವರದಿ ಕೊಡ್ತಾರೆ..? ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ರು.. ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.. ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಉದ್ದಾರ ಮಾಡ್ತೀವಿ ಅಂತಾರೆ.

ಗೊಂದಲ ಸ್ಪಷ್ಟವಾಗಬೇಕು.. ವೈಜ್ಞಾನಿಕವಾಗಿ ಆಗ್ಬೇಕು. ಹಿಂದುಳಿದವರಿಗೆ ಹೆಚ್ಚಿನ ಕಾರ್ಯಕ್ರಮ ಬರಬೇಕು. ಜಾತಿಗಣತಿ ಬಿಡುಗಡೆ ಮಾಡಿ ಅಂತಾ ಮೊನ್ನೆಯೇ ಹೇಳಿದ್ದೇನೆ. ವರದಿಕೊಟ್ಟು 8-10 ತಿಂಗಳಾಯ್ತು.. ಯಾಕೆ ಇಟ್ಟುಕೊಂಡಿದ್ದೀರಿ.? ಯಾಕೆ ಮುಡಾ ಹಗರಣ ಬಂದ್ಮೇಲೆ ಮಾತಾಡ್ತಾರೆ.? ಅವರ ಪಕ್ಷದಲ್ಲಿ ಮೊದಲಿನಿಂದಲೂ ವಿರೋಧ ಇದೆ. ಡಿಕೆಶಿ, ಶಾಮನೂರ ಶಿವಶಂಕರಪ್ಪ ಸೈನ್ ಮಾಡಿಕೊಟ್ಟಿದ್ದಾರೆ. ಅವ್ರಲ್ಲಿನೇ ಹೊಂದಾಣಿಕೆ, ಸ್ಪಷ್ಟತೆ ಇಲ್ಲ. ಆದಷ್ಟು ಬೇಗ ಜಾತಿಗಣತಿ ಹೊರಬಂದು ಚರ್ಚೆಯಾಗಲಿ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಕೆ.ಎಸ್.ಈಶ್ವರಪ್ಪ ಅವರ ರಾಯಣ್ಣ ಬ್ರಿಗೇಡ್ ಬಗ್ಗೆ ಮಾತನಾಡಿದ ಬೊಮ್ಮಾಯಿ, ಆ ಬಗ್ಗೆ ಮಾಹಿತಿ ಇಲ್ಲ. ಮೊನ್ನೆಯೇ ಡಿಕ್ಲೇರ್ ಮಾಡಿದ್ದಾರೆ.. ಮಾಡ್ಲಿ. ನಮ್ಮ ಪಕ್ಷ ತನ್ನದೇ ಕಾರ್ಯಕರ್ತ ಪಡೆ ಹೊಂದಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

- Advertisement -

Latest Posts

Don't Miss