Thursday, October 17, 2024

Latest Posts

ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

- Advertisement -

Political News: ಇಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ, ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಜಯ ಗಳಿಸಿದೆ. ಹೀಗಾಗಿ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಓಮರ್ ಅಬ್ದುಲ್ಲಾ ಅವರಿಗೆ ಪ್ರಮಾಣವಚನ ಬೋಧಿಸಿದರು. ಎನ್‌ಸಿ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದು. ಇದುವರೆಗೂ ಯಾವುದೇ ಕಾಂಗ್ರೆಸ್ ನಾಯಕರಿಗೆ ಸಚಿವ ಸ್ಥಾನ ನೀಡಲಿಲ್ಲ. ಈ ಬಗ್ಗೆ ಇನ್ನು ಕೆಲ ದಿನಗಳಲ್ಲೇ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಮ್ಮು-ಕಾಶ್ಮೀರ ಕಾಂಗ್ರೆಸ್ ಉಸ್ತುವಾರಿ ಸಚಿವ ಭರತ್ ಸಿಂಗ ಸೋಲಂಕಿ ಹೇಳಿದ್ದಾರೆ.

ಇದೇ ಕಾರಣಕ್ಕೆ ಇಂದು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರೊಂದಿಗೆ ಯಾವುದೇ ಕಾಂಗ್ರೆಸ್ ನಾಯಕರೂ ಪ್ರಮಾಣ ವಚನ ಸ್ವೀಕಾರ ಮಾಡಲಿಲ್ಲ. ಜಮ್ಮು ಕಾಶ್ಮೀರದಲ್ಲಿ ಇದ್ದ 90 ಕ್ಷೇತ್ರಗಳ ಪೈಕಿ, ಎನ್‌ಸಿ ಪಕ್ಷ 42 ಸ್ಥಾನ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 29 ಸ್ಥಾನಕ್ಕೆ ಸಮಾಧಾನ ಪಟ್ಟಿದೆ.

- Advertisement -

Latest Posts

Don't Miss