Friday, October 18, 2024

Latest Posts

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ..!

- Advertisement -

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.

ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ 2 ಕೋಟಿ ರೂಪಾಯಿ ನೀಡಿ ಮೋಸ ಹೋಗಿದ್ದಾರೆ.

ಹೀಗಾಗಿ ಪ್ರಹ್ಲಾದ್ ಜೋಶಿ ಅವರ ಸಹೋದರ ಮತ್ತು ಸಹೋದರಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೋಪಾಲ ಜೋಶಿ, ವಿಜಯಲಕ್ಷ್ಮಿ ಜೋಶಿ ಹಾಗೂ ಅಜಯ್ ಜೋಶಿ ವಿರುದ್ಧ ಬೆಂಗಳೂರಿನ ಬಸವೇಶ್ವನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಸುನೀತಾ ಚೌಹಾಣ್ ಎಂಬುವವರು ಎಫ್‌ಐಆರ್ ದಾಖಲಿಸಿದ್ದು, ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ 2018ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಪಡೆದು ಜಯಗಳಿಸಿದ್ದರು. ಆದರೆ 2023ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ನಂತರ ಎದುರಾದ ಲೋಕಸಭೆ ಚುನಾವಣೆ ಟಿಕೆಟ್‌ಗೆ ಪ್ರಯತ್ನಿಸಿದ್ದರು. ಇದೇ ವೇಳೆ ಅಥಣಿ ಎಂಜಿನಿಯರ್ ಶೇಖ‌ರ್ ನಾಯಕ್ ಎಂಬುವವರು ಪ್ರಹ್ಲಾದ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರ ಪರಿಚಯ ಮಾಡಿಕೊಟ್ಟಿದ್ದರು.

ಇದಲ್ಲದೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಹಾಗಾಗಿ ದೇವಾನಂದ್ ಅವರನ್ನು ಹುಬ್ಬಳ್ಳಿಯ ಮನೆಗೆ ಕರೆಸಿ, ನನ್ನ ಸಹೋದರ ಪ್ರಹ್ಲಾದ್ ಜೋಶಿ ವರ್ಚಸ್ಸು ತುಂಬಾ ಚೆನ್ನಾಗಿದೆ.  ಅವರು ಹೇಳಿದಂತೆ ಮೋದಿ ಹಾಗೂ ಅಮಿತ್ ಶಾ ಇಬ್ಬರೂ ಕೇಳುತ್ತಾರೆ. ನನ್ನ ತಮ್ಮನ ಜತೆಗೆ ಮಾತನಾಡಿ ನಿಮಗೆ ವಿಜಯಪುರ ಕ್ಷೇತ್ರಕ್ಕೆ ಬಿಜೆಪಿಯ ಟಿಕಟ್ ಕೊಡಿಸುತ್ತೇನೆಂದು ಗೋಪಾಲ್ ಜೋಶಿ ಭರವಸೆ ನೀಡಿದ್ದರು.

ಅಲ್ಲದೇ ಭರವಸೆ ನೀಡಿ 5 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು.   ಅಷ್ಟಾಗಲ್ಲ, ನಮ್ಮಲ್ಲಿ ಹಣವಿಲ್ಲ ಎಂದಾಗ 25 ರೂಪಾಯಿ ಲಕ್ಷ ಕೇಳಿ, ಚೆಕ್ ಸಹ ಪಡೆದಿದ್ದರು. ಆ ಹಣವನ್ನು ಬೆಂಗಳೂರಿನ ಬಸವೇಶ್ವರನಗರದಲ್ಲಿ ಇರುವ ವಿಜಯಲಕ್ಷ್ಮಿ ಅವರ ಮನೆಗೆ ತಲುಪಿಸಲಾಗಿತ್ತು. ನಂತರ, ಅಮಿತ್ ಶಾ ಅವರ ಆಪ್ತ ಸಹಾಯಕರ ಜತೆಗೆ ಮಾತನಾಡಿರುವುದಾಗಿ ಹೇಳಿದರು. ಆಮೇಲೆ ಟಿಕೆಟ್ ಕೊಡಿಸದೇ ಮೋಸ ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಚುನಾವಣೆಯಲ್ಲಿ ಸಂಪೂರ್ಣ ಖರ್ಚು ನೋಡಿಕೊಳ್ಳುವುದಾಗಿ ಹೇಳಿ 1.75 ಕೋಟಿ ರೂಪಾಯಿ ಪಡೆದುಕೊಂಡಿದ್ದರು ಎಂಬುದಾಗಿ ದೂರು ನೀಡಿ, ಮೂವರ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ.

- Advertisement -

Latest Posts

Don't Miss