ಚನ್ನಪಟ್ಟಣಕ್ಕೆ ಯೋಗೇಶ್ವ‌ರ್ ಅವರು ಹೊಸ ಶಕ್ತಿ ತುಂಬಲಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬಿಜೆಪಿಯ ಹಿರಿಯ ನಾಯಕ ಸಿ.ಪಿ.ಯೋಗೇಶ್ವರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಪಕ್ಷ ಸೇರಿದ್ದಾರೆ.

ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿಕೆಶಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಈಗಾಗಲೇ ಯೋಗೇಶ್ವರ್ ಅವರು ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದ್ದಾರೆ. ಗುರುವಾರ ಅವರು ನಾಮಪತ್ರ ಸಲ್ಲಿಕೆ ಮಾಡಲು ತಯಾರಿಯನ್ನೂ ಸಹ ಮಾಡಿಕೊಂಡಿದ್ದಾರೆ. ನಮ್ಮ ರಾಮನಗರ ಜಿಲ್ಲೆಯ ಪ್ರಮುಖ ಮುಖಂಡರಲ್ಲಿ ಒಬ್ಬರಾದ ಯೋಗೇಶ್ವರ್ ಅವರು ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಯೋಗೇಶ್ವರ್ ಅವರು ರಾಜಕಾರಣ ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದಿಂದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ನಾನೂ ಕೂಡ ಕಾಂಗ್ರೆಸ್‌ ಪಕ್ಷದಲ್ಲಿರಬೇಕು ಎಂದು ಬಯಸಿದ್ದಾರೆ. ಎಲ್ಲ ಪಕ್ಷಗಳನ್ನೂ ಅವರು ನೋಡಿದ್ದಾರೆ. ಪಕ್ಷೇತರರಾಗಿಯೂ ಗೆದ್ದಿದ್ದಾರೆ. ಜೆಡಿಎಸ್ ಜತೆ ಸಂಬಂಧ ಹೊಂದಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ಕೆಲಸ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಸಮೃದ್ಧವಾಗಿದೆ. ಚನ್ನಪಟ್ಟಣಕ್ಕೆ ಯೋಗೇಶ್ವ‌ರ್ ಅವರು ಹೊಸ ಶಕ್ತಿ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ತುಂಬು ಹೃದಯದಿಂದ ಅವರನ್ನು ಸ್ವಾಗತಿಸುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.

About The Author