ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಶಿಗ್ಗಾವಿ ಸವಣೂರು ಕ್ಷೇತದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ರೌಡಿಶೀಟರ್ ಅಂತ ಎಸ್ಪಿ ಹಾಗೂ ಅಜ್ಜಂಪೀರ್ ಖಾದ್ರಿ ಇಬ್ಬರೂ ಹೇಳಿದ್ದಾರೆ‌. ಎಸ್ಪಿ ಅವರು ಯಾಕೆ ಹೇಳಿದರು. ಅದನ್ನು ಯಾಕೆ ವಾಪಸ್ ತೊಗೆದುಕೊಂಡರು ಎಂದು ಸಿಎಂ ಸ್ಪಷ್ಟೀಕರಣ ನೀಡಬೇಕು. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದರು.

ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ ನೀಡಿರುವ ಹೇಳಿಕೆ ವಿರುದ್ದ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಈಗ ಬಗ್ಗೆ ಪ್ರಲ್ಹಾದ್ ಜೋಷಿಯವರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

About The Author