Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜೊತೆ ಮಾತನಾಡಿದ್ದು, ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ಸರ್ಕಾರದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡ್ತಾರೆ. ಒಂದುಕಡೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡ್ತಾರೆ. ಇದು ಇಬ್ಬದಿಗೆತನ ಅಲ್ಲವಾ ..? ಬಿಜೆಪಿಯವರಿಗೆ ಸ್ಪಷ್ಟವಾದ ನಿಲುವು ಇಲ್ಲ. ನಮ್ಮ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿದ ಯಾವ ಕೆಲಸಗಳು ಸ್ಥಗಿತವಾಗಿವೆ ಹೇಳಿ. ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆಮಾಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಈಬಗ್ಗೆ ಪರಿಶೀಲನೆ ಮಾಡಲು ಸಮೀತಿರಚನೆ ಮಾಡಲಾಗಿದೆ. ಕಳಪೆ ಗುಣಮಟ್ಟದ ಔಷಧಿ ಖರೀದಿ ಮಾಡಿರುವುದು ಸ್ಪಷ್ಟವಾದ್ರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಬಾಣಂತಿಯ ಸಾವು ಪ್ರಕರಣ ನಿಜ. ಮೀಟಿಂಗ್ ಮಾಡಿ ಕಳಪೆ ಔಷಧಿ ಕೊಟ್ಟಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಬ್ಲಾಕ್ ಲಿಸ್ಟ್ ಗೆ ಹಾಕಲು ಹೇಳಿದ್ದೇನೆ, ಅವರ ವಿಚಾರಣೆ ಮಾಡಲು ಹೇಳಿದ್ದೀನಿ. ಡ್ರಗ್ ಕಂಟ್ರೋಲ್ ರನ್ನಾ ಅವರನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಒಂದು ಕಮಿಟಿ ರಚನೆ ಮಾಡಲಾಗಿದೆ ಆ ಕಮಿಟಿ ವರದಿ ನೀಡಿದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೆವೆ. ಇದು ಮೋಸ್ಟ್ ಅನ್ಫಾರ್ಚುನೆಟ್. ಔಷಧೀಯ ತಯಾರಿಕೆ ಸಂಸ್ಥೆ ಕಳಪೆ ಔಷಧೀಯ ಕೊಟ್ಟಿರೋದು ಸಾಬೀತು ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾವಿನಪ್ಪಿರುವ ಬಾಣಂತಿಯರ ಕುಟುಂಬಕ್ಕೆ ಐದು ಲಕ್ಷ ನಿಡುತ್ತೇವೆ. ಕಳಪೆ ಗುಣಮಟ್ಟದ ಔಷಧೀಯ ಖರೀದಿಗೆ ನಾನೇನು ಆದೇಶ ಮಾಡಿದ್ದೆನಾ? ಬಿಜೆಪಿಯವರು ಕೋವಿಡ್ ಹಗರಣದಲ್ಲಿ ಕಳಪೆ ಔಷಧೀಯ ಖರೀದಿ ಮಾಡಿದ್ದಾರೆ. ಅಲ್ಲದೆ ಒಂದಕ್ಕೆ ಹತ್ತು ಪಟ್ಟು ದುಡ್ಡು ಕೊಟ್ಟು, ಟೆಂಡರ್ ಕರೆಯದೆ ಖರೀದಿ ಮಾಡಿದ್ದಾರೆ. ಅಂದಿನ ಸಿಎಂ ಮತ್ತು ಆರೋಗ್ಯ ಸಚಿವರು ಅದಕ್ಕೆ ಹೊಣೆ ಎಂದು ಸಿಎಂ ಹೇಳಿದ್ದಾರೆ.
ಅಧಿವೇಶನದಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪ್ರಜಾಪ್ರಭುತ್ವದಲ್ಲಿ ಹೋರಾಟ ಎಲ್ಲರೂ ಮಾಡಬಹುದು ಅದಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜೊತೆಗೆ ಮಾತನಾಡಿದ್ರೆ ಅದಕ್ಕೆ ಸಮಂಜಸ ಉತ್ತರ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.