Wednesday, February 5, 2025

Latest Posts

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ: ಕುಮಾರಸ್ವಾಮಿ

- Advertisement -

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಹೆಚ್ಡಿಕೆ ಬೇಸರ ಹೊರಹಾಕಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

Latest Posts

Don't Miss