Sunday, December 22, 2024

Latest Posts

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ.

ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ.

ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ, ಮೂಲಭೂತ ಸೌಕರ್ಯ, ರೋಗಿಗಳಿಗೆ ಬೇಕಾದ ಸವಲತ್ತುಗಳನ್ನು ಕುರಿತು ಪರಿಶೀಲನೆ ನಡೆಸಲಿದ್ದಾರೆ.

ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೊರಟಿದೆ. ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲೇ ಸೋಂಕಿತರ ಸಂಖ್ಯೆ ಹೆಚ್ಚಿದೆ. ಅಲ್ಲದೇ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಂಬತ್ತು ಸಾವಿರ ದಾಟಿದೆ.

ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss