Thursday, December 12, 2024

Latest Posts

ಮಹಿಳೆ ಕೊ*ಗೆ ಯತ್ನ; ನಾಲ್ಕು ಆರೋಪಿಗಳನ್ನ ಬಂಧಿಸಿದ ಹಳೇ ಹುಬ್ಬಳ್ಳಿ ಪೋಲಿಸರು!

- Advertisement -

Hubli News: ಹುಬ್ಬಳ್ಳಿ:- ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ ಫೈನಾನ್ಸ್ ಮಾಡಿದ್ದು, ಈ ನಡುವೆ ಸುವರ್ಣಾ ಎಂಬ ಮಹಿಳೆಯ ಜೊತೆ ಅಭಿಷೇಕ್ ಅತಿಯಾದ ಸಲುಗೆ ಸ್ನೇಹ ಬೆಳೆದಿತ್ತು ಈ ವಿಚಾರವನ್ನು ಪಲ್ಲವಿ ಎಂಬಾಕೆ ಸುವರ್ಣಾಳ ಮನೆಯವರಿಗೆ ತಿಳಿಸಿದ್ದಾಳೆ.

ಆದ್ದರಿಂದ ಕೋಪಿತಗೊಂಡ ಅಭಿಷೇಕ ಹಾಗೂ ಸುವರ್ಣಾ, ಪಲ್ಲವಿಗೆ ಬುದ್ದಿ ಕಲಿಸಬೇಕು ಎಂದು ಪ್ಲ್ಯಾನ್ ಮಾಡಿದ್ದಾರೆ. ಅಭಿಷೇಕ್ ತನ್ನ ಇಬ್ಬರು ಸ್ನೇಹಿತರಾದ ಅಭಿಷೇಕ ಹಾಗೂ ಪ್ರಜ್ವಲ್ ಎಂಬುವರಿಂದ ಮಚ್ಚನ್ನು ತರಿಸಿ ಪಲ್ಲವಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು ಈ ಕುರಿತು ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಪಟ್ಟಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ನೇತೃತ್ವದ ತಂಡವು ಪ್ರಕರಣದ ಆರೋಪಿಗಳಾದ ಅಭಿಷೇಕ್ ಬಿಲಾನಾ, ಸುವರ್ಣ ಜರೆ, ಅಭಿಷೇಕ್ ಶಿಕ್ಕಲಿಗಾರ್, ಪ್ರಜ್ವಲ್ ಘೋಡಕೆ ಎಂಬ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

- Advertisement -

Latest Posts

Don't Miss