Saturday, December 14, 2024

Latest Posts

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

- Advertisement -

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.

ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ ಕಾಟ ಕೊಟ್ಟಿದ್ದು, ಈ ಕಾರಣಕ್ಕೆ ತಾವು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ತಿಪ್ಪಣ್ಣ ರೈಲಿಗೆ ತಲೆಕೊಟ್ಟಿದ್ದಾರೆ.

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ತಿಪ್ಪಣ್ಣನ ತಂದೆ ದೂರು ದಾಖಲಿಸಿ, ತಮ್ಮ ಪುತ್ರನ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ. ಇನ್ನು ಡೆತ್ ನೋಟ್‌ನಲ್ಲಿರುವ ಮಾಹಿತಿ ಆಧರಿಸಿ, ಪತ್ನಿ ಮತ್ತು ಆಕೆಯ ತಂದೆಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಸಿ.ವಿ.ರಾಮನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆಂದು ಕರೆದೊಯ್ಯಲಾಗಿದೆ.

- Advertisement -

Latest Posts

Don't Miss