ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.
ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಿಬಿಎಂಪಿಯಲ್ಲಿ ಘನತ್ಯಾಜ್ಯ ಕಾರ್ಯಕರ್ತೆಯರಾಗಿ 280 ಜನ ಕಾರ್ಯನಿರ್ವಹಿಸುತ್ತಿದ್ದಾರೆ.
ಕಳೆದ ಏಳು ತಿಂಗಳಿನಿಂದ ಅವರಿಗೆ ವೇತನ ನೀಡಿಲ್ಲ. ಕೊರೊನಾ ಮಧ್ಯೆ ವೇತನವನ್ನೇ ನಂಬಿಕೊಂಡಿದ್ದ ಸಾಕಷ್ಟು ಕುಟುಂಬಗಳಿಗೆ ಸಂಕಷ್ಟ ಉಂಟಾಗಿದೆ. ಈ ಹಿನ್ನೆಲೆ ನಾಳೆ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು, ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಕುಳಿತು ಪ್ರತಿಭಟನೆಗೆ ನಡೆಸಲು ನಿರ್ಧರಿಸಿದ್ದಾರೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು


