Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಬಾಂಗ್ಲಾ ಪ್ರಜೆ ಬಂಧನ

Political News: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಓರ್ವ ಬಾಂಗ್ಲಾ ಪ್ರಜೆ, ಜೀವ ಬೆದರಿಕೆ ಹಾಕಿ ವೀಡಿಯೋ ಮಾಡಿ ಹರಿಬಿಟ್ಟಿದ್ದ. ಇದೀಗ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಾಂಗ್ಲಾದೇಶದವನಾದ ಶೇಖ್ ಅತಾಲ್ ಎಂಬುವವನನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತನ ಬಳಿ ಪಿಸ್ತೂಲ್ ಸೇರಿ ಹಲವು ಆಯುಧಗಳನ್ನು ಮತ್ತು ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಕ್ಸ್‌ನಲ್ಲಿ ಈತ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದ.

ಇನ್ನು ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಇದಕ್ಕಿಂತ ಮುನ್ನ ಹಲವು ಬಾರಿ ಯೋಗಿಗೆ ಜೀವ ಬೆದರಿಕೆ ಬಂದಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬೆದರಿಕೆ ಹಾಕಿದ್ದರು. ಅಲ್ಲದೇ, ಕೆಲವರು ಓಪನ್ ಆಗಿ ನಾನೇ ನಿಮಗೆ ಜೀವ ಬೆದರಿಕೆ ಹಾಕುತ್ತಿದ್ದೇನೆ, ಬೇಕಾದರೆ ಮನೆಗೆ ಬುಲ್ಡೋಜರ್ ನುಗ್ಗಿಸಿ ಎಂದು ಚಾಲೆಂಜ್ ಹಾಕಿದ್ದು ಇದೆ.

About The Author