Monday, December 23, 2024

Latest Posts

VIJAY MALLYA : ವಿಜಯ್ ಮಲ್ಯಗೆ ಸೇರಿದ ರೂ 14,131 ಕೋಟಿ ಆಸ್ತಿ ಜಪ್ತಿ

- Advertisement -

ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡು, ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಿರುವ ವಿಷ್ಯ ನಿಮಗೆಲ್ಲಾ ಗೊತ್ತೆ ಇದೆ. ಸದ್ಯ ವಿಜಯ್ ಮಲ್ಯರ 14,131 ಕೋಟಿ ಮೌಲ್ಯದ ಆಸ್ತಿಯನ್ನ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ.

ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯವು ಒಟ್ಟು ರೂ 22,280 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ ಮತ್ತು ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟವನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸೀತಾರಾಮನ್ ಲೋಕಸಭೆಗೆ ತಿಳಿಸಿದರು.

 

ಮರಳಿ ಪಡೆದ ಮೊತ್ತವು ವಿಜಯ್‌ ಮಲ್ಯನ ರೂ 1,052 ಕೋಟಿ ಮತ್ತು ಚೋಕ್ಸಿಯವರ ರೂ 2,565 ಕೋಟಿಗಳನ್ನು ಒಳಗೊಂಡಿದೆ. ನ್ಯಾಷನಲ್ ಸ್ಪಾಟ್ ಎಕ್ಸ್‌ಚೇಂಜ್ ಲಿಮಿಟೆಡ್ ಅಥವಾ ಎನ್‌ಎಸ್‌ಇಎಲ್‌ನಲ್ಲಿನ ರೂ 17.5 ಕೋಟಿ ಮೊತ್ತವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

“ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ರೂ 22,280 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಯಶಸ್ವಿಯಾಗಿ ಮರಳಿ ಪಡೆದಿದೆ. ನಾವು ಯಾರನ್ನೂ ಬಿಟ್ಟಿಲ್ಲ. ಅವರು ದೇಶ ಬಿಟ್ಟು ಓಡಿ ಹೋದರೂ ನಾವು ಅವರ ಹಿಂದೆ ಹೋಗಿದ್ದೇವೆ. ಬ್ಯಾಂಕ್‌ಗಳಿಗೆ ಹಿಂತಿರುಗಬೇಕಾದ ಹಣ ಹಿಂದಿರುಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದಿದ್ದಾರೆ.

- Advertisement -

Latest Posts

Don't Miss