Tuesday, March 11, 2025

Latest Posts

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಸಿ.ಟಿ.ರವಿ ವಿರುದ್ಧ FIR

- Advertisement -

Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್ ಮುಖಂಡರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ಕಾರಣಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ವಿರುದ್ಧ ಹಲ್ಲೆಗೆ ಯತ್ನಿಸಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಸುವರ್ಣಸೌಧದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸಿ.ಟಿ.ರವಿ ವಿರುದ್ಧ ಪ್ರತಿಕ್ರಿಯಿಸಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದಿದ್ದಾರೆ.

- Advertisement -

Latest Posts

Don't Miss