Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ.
ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ ಕರೆತಂದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ನೇರವಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಿ.ಟಿ.ರವಿ ಹೇಳಿದ್ದಾರೆ. ಅಲ್ಲದೇ ಪೊಲೀಸರು ಕೂಡ ನಿಗೂಢವಾಗಿ ವರ್ತಿಸುತ್ತಿದ್ದಾರೆ. ಅವರಿಂದ ಕೂಡ ನನ್ನ ಜೀವಕ್ಕೆ ಅಪಾಯವಿದೆ ಎಂದು ರವಿ ಆರೋಪಿಸಿದ್ದಾರೆ.
ಅಲ್ಲದೇ, ಸುವರ್ಣಸೌಧದಲ್ಲೇ ನನ್ನ ಮೇಲೆ ಕೊಲೆ ಪ್ರಯತ್ನ ನಡೆಯಿತು. ಈ ಬಗ್ಗೆ ನಾನು ಸಭಾಪತಿಗಳಿಗೆ ದೂರು ನೀಡಿದ್ದೇನೆ. ಪೊಲೀಸರಿಗೂ ದೂರು ನೀಡಿದ್ದೇನೆ. ಎಫ್ಐಆರ್ ದಾಖಲಿಸಲು ಹೇಳಿದ್ದೇನೆ. ಆದರೆ ಪೊಲೀಸರು ನನಗೆ ಅದರ ಎಫ್‌ಐಆರ್ ಕಾಾಪಿ ಕೊಡುತ್ತಿಲ್ಲ. ಪೊಲೀಸರ ಈ ನಡೆಯ ದುರುದ್ದೇಶವೇನು ಎಂದು ನನಗೆ ತಿಳಿಯುತ್ತಿಲ್ಲ ಎಂದು ಸಿ.ಟಿ.ರವಿ ಹೇಳಿದ್ದಾರೆ.
ಸದ್ಯ ಪೊಲೀಸರು ಸಿ.ಟಿ.ರವಿ ಅವರನ್ನು ಬೆಂಗಳೂರಿನ ಕೋರ್ಟ್‌ಗೆ ತಂದು ಹಾಾಜರುಪಡಿಸಿದ್ದು, ವಿಚಾರಣೆ ನಡೆಯುತ್ತಿದೆ.