ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಗೃಹಸಚಿವರ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಜೋಶಿ‌ ಲೇವಡಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಿ.ಪರಮೇಶ್ವರ್,  ಸ್ಪೀಕರ್ ಅವರು ತಮ್ಮ‌ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಹೆಬ್ಬಾಳಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಓಡಿಗೆ ಹಸ್ತತರ ಮಾಡಲಾಗಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

ಸಿಟಿ ರವಿ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರದ ಬಗ್ಗೆ ಮಾತನಾಡಿರುವ ಪರಮೇಶ್ವರ್,  ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು ಎಂದಿದ್ದಾರೆ. ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ ವಿಚಾರದ ಬಗ್ಗೆ ಮಾತನಾಡಿದ್ದು, ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ‌ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಕಿಮ್ಸ್ ಆಸ್ಪತ್ರೆ ಬಳಿ ಜಿ.ಪರಮೇಶ್ವರ ಮಾತನಾಡಿದ್ದು, ಅಯ್ಯಪ್ಪ ಮಾಲಾಧಾರಿಗಳ ಘಟನೆ ಬಗ್ಗೆ ವಿಷಾಧ ವ್ಯಕ್ತಪಡಿಸುತ್ತೇನೆ. 9 ಜನರಲ್ಲಿ ಬಹುತೇಕರಿಗೆ 80 ರಿಂದ 90 ಶೇಕಡಾ ಸುಟ್ಡ ಗಾಯವಾಗಿವೆ. ವೈದ್ಯರು ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ. ವೈದ್ಯರಿಗೆ ನಿರ್ಲಕ್ಷ್ಯ ಮಾಡದಂತೆ ಸೂಚನೆ ಕೊಟ್ಟಿದ್ದೇವೆ. 20 ರಷ್ಟು ಸುಟ್ಟಗಾಯವಾಗಿರೋ ವಿನಾಯಕ್ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಉಳಿದವರನ್ನ ಕ್ರಿಟಿಕಲ್ ಅಂತಾ ಹೇಳುತ್ತಿದ್ದಾರೆ, ಕಾಯ್ದು ನೋಡಬೇಕಾಗಿದೆ.

ಗಾಯಾಳುಗಳನ್ನ ಬರ್ನಿಂಗ್ ವಾರ್ಡ್ ಗೆ ಶಿಫ್ಟ್ ಮಾಡಲು ಸೂಚನೆ. ಅವರನ್ನು ಉಳಿಸೋ ಪ್ರಯತ್ನ ಮಾಡಬೇಕಿದೆ. ಆಮೇಲೆ ಪರಿಹಾರದ ಯೋಚನೆ ಮಾಡೋಣ. ಇದೊಂದು ವಿಶೇಷ ಕೇಸ್ ಎಂದು ಪರಿಗಣಿಸಿ,ಮುಖ್ಯಮಂತ್ರಿಗಳ ಪರಿಹಾರದ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗುವುದು. ಇವತ್ತೆ ಡಿಸಿ ಅವರು ವರದಿ ಸಲ್ಲಿಸುತ್ತಾರೆ. ಪರಿಹಾರ ನೀಡಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಕಿಮ್ಸ್ ನಲ್ಲಿ ನಿರ್ಲಕ್ಷ್ಯ ಆಗಿರೋ ಮಾಹಿತಿ ಇದೆ. ಅದನ್ನು ಆಂತರಿಕ ವಿಚಾರಣೆ ಮಾಡುತ್ತೇವೆ. ಆಗಿರೋ ತಪ್ಪುಗಳ ಬಗ್ಹೆ ವಿಚಾರಣೆ ಮಾಡ್ತೀವಿ. ಇದೀಗ ನಿರ್ಲಕ್ಷ್ಯದ ಫೋಸ್ಟ್ ಮಾರ್ಟಂ ಕ್ಕಿಂತ ಅವರ ಆರೋಗ್ಯ ಮುಖ್ಯ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

About The Author