ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಅದೇನಂದ್ರೆ, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದಲ್ಲಿ ಮತ್ತೆ ಓದಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಹೌದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ 2010ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಕೇಂದ್ರ ಸರ್ಕಾರದ ಹೊಸ ರೂಲ್ಸ್ ಪ್ರಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆದರೆ ಅದೇ ಕ್ಲಾಸ್ನಲ್ಲೇ ಮತ್ತೆ ಓದಬೇಕು ಎಂಬುದುನ್ನ ಸ್ಪಷ್ಟಪಡಿಸಿದೆ.
ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು 2019 ರಲ್ಲಿ ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಈಗಾಗಲೇ ‘ಅನುತ್ತೀರ್ಣರಹಿತ ನೀತಿ’ಯನ್ನು ತೆಗೆದುಹಾಕಿವೆ. ಕೇಂದ್ರ ಸರ್ಕಾರದ ಅಧಿಕೃತ ಸೂಚನೆ ಪ್ರಕಾರ, 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಲು ವಿಫಲವಾದರೆ, ಅವರಿಗೆ ಹೆಚ್ಚುವರಿ ತರಬೇತಿ ನೀಡಲಾಗುತ್ತದೆ, ಫಲಿತಾಂಶ ಬಂದ ಎರಡು ತಿಂಗಳ ಒಳಗೆ ಮರುಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.
ಕನಿಷ್ಠ 100 ವಿದ್ಯಾರ್ಥಿಗಳನ್ನು ಕರೆತರುವ ಸುತ್ತೋಲೆ ವಾಪಸ್ ಮರುಪರೀಕ್ಷೆಯಲ್ಲಿ ಕೂಡ ಉತ್ತೀರ್ಣವಾಗಲು ವಿಫಲವಾದರೆ ಆ ವಿದ್ಯಾರ್ಥಿ ಐದನೇ ತರಗತಿ ಅಥವಾ ಎಂಟನೇ ತರಗತಿಯಲ್ಲಿ ಮತ್ತೆ ಓದಬೇಕಾಗುತ್ತದೆ. ಆದರೆ ಶಿಕ್ಷಣ ಪೂರ್ಣಗೊಳ್ಳುವವರೆಗೆ ಯಾವುದೇ ಶಾಲೆಯಿಂದ ಮಕ್ಕಳನ್ನು ಹೊರಹಾಕುವಂತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರೀಯ ವಿದ್ಯಾಲಯಗಳು ಈ ನಿಯಮವು ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು, ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರ ನಡೆಸುತ್ತಿರುವ 3,000 ಕ್ಕೂ ಹೆಚ್ಚು ಶಾಲೆಗಳಿಗೆ ಅನ್ವಯವಾಗುತ್ತದೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಜ್ಯಗಳಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ, ಈ ವಿಚಾರದಲ್ಲಿ ರಾಜ್ಯಗಳು ತಮ್ಮ ನಿರ್ಧಾರವನ್ನು ಅವಕಾಶ ಇರುತ್ತದೆ. ಈಗಾಲೇ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈ ನಿಯಮವನ್ನು ತೆಗೆದುಹಾಕಿವೆ. ಹರಿಯಾಣ ಮತ್ತು ಪುದುಚೇರಿ ಈ ನಿಯಮದ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಆದರೆ ಉಳಿದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇದನ್ನು ಮುಂದುವರೆಸಲು ನಿರ್ಧರಿಸಿದೆ.
ಹೀಗಾಗಿ 5ನೇ ತರಗತಿಯಲ್ಲಿ ಹಾಗೇ 8ನೇ ತರಗತಿಯ ಪರೀಕ್ಷೆಯಲ್ಲಿ ಫೇಲ್ ಆದ್ರೆ ಮತ್ತೆ 1 ವರ್ಷ ನೀವು ಅದೇ ತರಗತಿಯಲ್ಲಿ ಓದಬೇಕಾಗುತ್ತೆ…