ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಇಂದು ಸರ್ಕಾರಿ ಗೌರವ ಸಲ್ಲಿಸುವ ಮೂಲಕ, ಸಿಖ್ ವಿಧಿವಿಧಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.

ದೆಹಲಿಯ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನೆರವೇರಿದ್ದು, ಮೂರು ಸೇನಾಪಡೆಗಳು ಡಾ.ಮನಮೋಹನ್ ಸಿಂಗ್‌ಗೆ ಸರ್ಕಾರಿ ಗೌರವ ಸಲ್ಲಿಸಿದವು. ಪ್ರಧಾನಿ ಮೋದಿ, ರಾಷ್ಟಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಗೃಹಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೇರಿ ಹಲವು ರಾಜಕೀಯ ಗಣ್ಯರು, ಸಿಂಗ್ ಪಾರ್ಥೀವ ಶರೀರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಸೇನಾಪಡೆಗಳು ರಾಷ್ಟ್ರಧ್ವಜವನ್ನು ಪಾರ್ಥೀವ ಶರೀರದ ಮೇಲೆ ಹಾಕಿ, ಬಳಿಕ ಅದನ್ನು ಮಡಿಚಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬಳಿಕ ಸಿಖ್ ಸಂಪ್ರದಾಯದ ಮೂಲಕ ಪ್ರಾರ್ಥನೆ ಸಲ್ಲಿಸಿ, ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಅಂತ್ಯಕ್ರಿಯೆ ಮಾಡಲಾಯಿತು.

About The Author