Friday, March 14, 2025

Latest Posts

HASSAN : ಪತ್ನಿಯ ಟಾರ್ಚರ್ ಗೆ ಬೇಸತ್ತ ಗಂಡನ ಈ ನಿರ್ಧಾರ ಸರಿಯೇ..?

- Advertisement -

ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಒಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾಸನ ನಗರದ ಪ್ರಮೋದ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರಮೋದ್‌ ಹಾಗೂ ಅವರ ಪತ್ನಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಆಕೆಯ ತಮ್ಮಂದಿರು ಅವರಿಗೆ ಕಿರುಕುಳ ನೀಡುತ್ತಿದ್ದರು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತ ಪ್ರಮೋದ್ ಡಿ.29 ರಂದು ಸಂಜೆ ಮನೆಯಲ್ಲಿಯೇ ಮೊಬೈಲ್ ಬಿಟ್ಟು ತೆರಳಿದ್ದರು. ಪ್ರಮೋದ್‌ಗಾಗಿ ಪೋಷಕರು ಹುಡುಕಾಟ ನಡೆಸಿದ್ದು, ನಂತರ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಅಂದು ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಅದನ್ನು ಕಂಡ ಸ್ಥಳೀಯರು ಪರಿಶೀಲನೆ ನಡೆಸಿದ ವೇಳೆ ಬೈಕ್‌ನಲ್ಲಿ ಬ್ಯಾಂಕ್‌ನ ಪಾಸ್‌ಬುಕ್‌ಗಳು ಪತ್ತೆಯಾಗಿದ್ದವು. ಪಾಸ್‌ಬುಕ್‌ನಲ್ಲಿದ್ದ ಫೋನ್ ನಂಬರ್‌ಗೆ ಕರೆ ಮಾಡಿದ ವೇಳೆ ಪ್ರಮೋದ್ ತಂದೆ ಕರೆ ಸ್ವೀಕರಿಸಿದ್ದು, ನದಿಯ ಬಳಿ ದ್ವಿಚಕ್ರ ವಾಹನ ನಿಂತಿರುವ ಬಗ್ಗೆ ಮಾಹಿತಿ ನೀಡಿದ್ದರು.

 

ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಡಿ.30 ರಿಂದ ಹೇಮಾವತಿ ನದಿಯಲ್ಲಿ ಹುಡುಕಾಟ ನಡೆಸಿದ್ರು. ಬುಧವಾರ ಬೆಳಗ್ಗೆ ಪ್ರಮೋದ್ ಶವ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಡನ ಶವ ನೋಡಲು ಬಂದ ಪತ್ನಿ ವಿರುದ್ದ ಪ್ರಮೋದ್ ಕುಟುಂಬ ಸದಸ್ಯರ ಆಕ್ರೋಶ ಹೊರಹಾಕಿದ್ದು, ಶವಾಗಾರದ ಎದುರು ಹೈಡ್ರಾಮ ನಡೆಯಿತು. ತಾಯಿ ಹಾಗು ಮಗು ಜೊತೆ ಪತಿಯ ಶವ ನೋಡಲು ಬಂದಿದ್ದ ಪತ್ನಿ ನಂದಿನಿ ಹಾಗೂ ಪ್ರಮೋದ್ ಕುಟುಂಬ ಸದಸ್ಯರ ನಡುವೆ ವಾಗ್ವಾದ ನಡೆದಿದೆ.

ಪ್ರಮೋದ್ ಸಾವಿಗೆ ಆತನ ಪತ್ನಿಯೇ ಕಾರಣ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪತ್ನಿ ಹಾಗು ಆಕೆ ತಾಯಿಯನ್ನು ಪೊಲೀಸರು ರಕ್ಷಿಸಿ ಕರೆದೊಯ್ದರು. ಪ್ರಮೋದ್ ಕುಟುಂಬ ಸದಸ್ಯರು ಪತ್ನಿಯನ್ನ ಬೆನ್ನಟ್ಟಿ ಬಂದರು. ಆಗ ಜನರನ್ನು ನಿಯಂತ್ರಣ ಮಾಡಲು ಪೊಲೀಸರ ಹರ ಸಾಹಸ ಪಡಬೇಕಾಯಿತು.

- Advertisement -

Latest Posts

Don't Miss