Delhi News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟರ್ಕಿ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದು, ದೆಹಲಿಯಲ್ಲಿ ಪ್ಯಾರಿ ದೀದಿ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ.
ಬಳಿಕ ನವದೆಹಲಿಯಲ್ಲಿ ಸುದ್‌ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ದೆಹಲಿಯಲ್ಲಿ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ “ಪ್ಯಾರಿ ದೀದಿ” ಯೋಜನೆಯನ್ನು ಘೋಷಿಸಲಾಯಿತು. ದಿಲ್ಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಈ ಯೋಜನೆಯು ಅನುಷ್ಠಾನಗೊಳ್ಳಲಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ದಿಲ್ಲಿ ಜನತೆಯಲ್ಲಿ ಡಿಸಿಎಂ ಮನವಿ ಮಾಡಿಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ದಿಲ್ಲಿಯಲ್ಲೂ ಕೂಡ ಅದೇ ರೀತಿ ಇತಿಹಾಸ ಸೃಷ್ಟಿಸುತ್ತೇವೆ ಎಂದು ಭರವಸೆ ನೀಡಿದರು.