ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ.

ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ ಬಳಿಕ ನೇಣಿಗೆ ಹಾಕಿದ್ದಾರೆಂದು ಆರೋಪಿಸಿದ್ದಾರೆ.

ಇನ್ನು ಕೆಲ ಮಾಹಿತಿ ಪ್ರಕಾರ ರಾತ್ರಿ 1 ಗಂಟೆಗೆ ದೇಬೇಂದ್ರನಾಥ್ ಮನೆಗೆ ಕೆಲವರು ಬಂದು ಶಾಸಕರನ್ನು ಕರೆದೊಯ್ದಿದ್ದರಂತೆ. ಈ ಬಗ್ಗೆ ಸ್ಥಳೀಯ ಬಿಜೆಪಿಗರು ಮಾತನಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಇದು ರಾಜಕೀಯ ಪ್ರೇರಿತ ಕೊಲೆ ಆತ್ಮಹತ್ಯೆಯಲ್ಲ ಎಂದು ಆರೋಪಿಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ನೇಣು ಬಿಗಿದ ಪರಿಸ್ಥಿತಿಯಲ್ಲಿ ಸಿಕ್ಕ ದೇಬೇಂದ್ರನಾಥ್‌ರ ಶವವನ್ನು ನೋಡಿ ಗ್ರಾಮಸ್ಥರೇ ಹೇಳುತ್ತಿದ್ದಾರೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು. ಇವರು ಮಾಡಿದ ತಪ್ಪೆಂದರೆ ಇವರು 2019ರಲ್ಲಿ ಬಿಜೆಪಿ ಸೇರಿದ್ದು ಎಂದು ಹೇಳಿದೆ.
ಮೊದಲಿಗೆ ಸಿಪಿಎಂ ಪಕ್ಷದಿಂದ ಹೆಮ್ಟಾಬಾದ್ ಕ್ಷೇತ್ರದಿಂದ ಆಯ್ಕೆಯಾಗಿದ್ದ ದೇಬೇಂದ್ರನಾಥ್ ರಾಯ್, ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.