Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ.
ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ ಮಹಿಳಾ ಸಂಘಗಳ ಮೂಲಕ ವಿವಿಧ ಮೈಕ್ರೋ ಫೈನಾನ್ಸ್ ಗಳಲ್ಲಿ ಎಂಟು ಲಕ್ಷ ರೂ ಸಾಲ ಪಡೆದಿದ್ದರಂತೆ. ಪಡೆದ ಸಾಲಕ್ಕೆ ಪ್ರತಿ ತಿಂಗಳು 40 ಸಾವಿರ ಕಂತಿನಂತೆ ಸಾಲ ಮರುಪಾವತಿ ಮಾಡುತ್ತಾ ಬಂದಿದ್ದರಂತೆ.
ಆದ್ರೂ ಕೂಡಾ ಕೆಲವು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ಹೆಚ್ಚಾದ ಬೆನ್ನಲೆ ಮೆಹಬೂಬ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಟುಂಬಸ್ಥರ ಗಮನಕ್ಕೆ ಬಂದ ಕೂಡಲೇ ವ್ಯಕ್ತಿಯನ್ನು ರಕ್ಷಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಹುಬ್ಬಳ್ಳಿ ಕಮರಿಪೇಟ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಮಾಧ್ಯಮಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಮೆಹಬೂಬ್ ಅಲಿ ಪ್ರತಿಕ್ರಿಯೆ ನೀಡಿದ್ದು, ವಿವಿಧ ಮಹಿಳಾ ಸಂಘಗಳ ಮೂಲಕ ಸಾಲ ಪಡೆದುಕೊಂಡಿದೆ. ಅದಕ್ಕೆ ಪ್ರತಿಯಾಗಿ ಸಾಲ ಮರು ಪಾವತಿ ಮಾಡುತ್ತಾ ಬಂದರು ಕೂಡಾ ಕೆಲವು ಮೈಕ್ರೋ ಫಾನನ್ಸಗಳು ಕಿರುಕುಳ ನೀಡುತ್ತಿದ್ದವು.
ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಮುಂದಾಗಿದೆ ಎಂದಿದ್ದಾರೆ. ಈ ಕುರಿತು ಪೊಲೀಸ ಕಮಿಷನರ್ ಎನ್ ಶಶಿಕುಮಾರ ಮಾತನಾಡಿ, ಜಿಲ್ಲೆಯ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಂದು ಕಿರುಕುಳ ಪ್ರಕರಣ ದಾಖಲಾಗಿದೆ. ಕಮರಿಪೇಟ್ ಪೊಲೀಸ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಠಾಣಾ ಅಧಿಕಾರಿಗಳು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಕಾನೂನು ಉಲ್ಲಂಘಿಸಿ ಸಾಲಾ ಮರುಪಾವತಿಗೆ ಮುಂದಾದಲ್ಲಿ ಕಾನೂಕ್ರಮ ಕೈಗೊಳ್ಳುಲಾಗುವುದು ಎಂದರು.