Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ.
ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಕಡಿಮೆ ಮಾಡಲು ನಿರ್ಧರಿಸಲಾಗಿದೆ.
ಇಷ್ಟೇ ಅಲ್ಲದೇ, ಆಸ್ಪತ್ರೆ, ಸರ್ಕಾರಿ ಶಾಲೆಗಳಿಗೆ ಇಂಟರ್‌ನೆಟ್ ಸಂಪರ್ಕ ಕೊಡಿಸುವ ಎಲ್ಲ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಅಲ್ಲದೇ ಕ್ಯಾನ್ಸರ್ ಸೇರಿ 36 ಜೀವರಕ್ಷಕ ಔಷಧಿಗಳ ಬೆಲೆಯನ್ನು ಸಹ ಕಡಿಮೆ ಮಾಡುವುದಾಗಿ ಹಣಕಾಸು ಸಚಿವರು ಘೋಷಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ನಿರ್ಮಲಾ ಸೀತಾರಾಮನ್ ತಮ್ಮ 8ನೇ ವರ್ಷದ ಬಜೆಟ್ ಮಂಡನೆ ಮಾಡಿದ್ದಾರೆ. ಅಂದ್ರೆ 8ನೇ ಬಾರಿ ನಿರ್ಮಲಾ ಬಜೆಟ್ ಮಂಡಿಸಿದ್ದಾರೆ.