Saturday, February 8, 2025

Latest Posts

3 ದಶಕಗಳ ಬಳಿಕ ದೆಹಲಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ, ಅಭಿನಂದಿಸಿದ ಬೊಮ್ಮಾಯಿ

- Advertisement -

Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ‌ ಎಂದಿದ್ದಾರೆ.

ದೆಹಲಿಯಲ್ಲಿ ಮೂವತ್ತು ವರ್ಷದ ನಂತರ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲಿಸಿ ದೆಹಲಿ ಜನರು ಆಪ್ ಗೆ ಬೆಂಬಲಿಸಿದ್ದರು. ಆದರೆ, ಅವರ ಆಡಳಿತ ವೈಖರಿ ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿದ್ದಾರೆ. ಇನ್ನೊಂದೆಡೆ ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ ಪ್ರಮಾಣದ ಬೆಂಬಲ ನೀಡಿದ್ದಾರೆ‌. ಆಪ್ ಪ್ರತಿಯೊಂದರಲ್ಲೂ ಸುಳ್ಳು ಹೇಳುವುದು, ಹಲವಾರು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ತಾವು ಮಾಡದಿರುವ ಕೆಲಸಕ್ಕೆ ಬೇರೆಯವರನ್ನು ದೂಷಿಸುತ್ತಿದ್ದರು. ರಸ್ತೆ, ಕುಡಿಯುವ ನೀರು ಕೊಡಲು ಆಗಿಲ್ಲ. ಆಯುಷ್ಮಾನ್ ಯೋಜನೆ ಜಾರಿಗೊಳಿಸದಿರುವುದು ಬಡವರಿಗೆ ಬೇಸರ ತರಿಸಿದೆ.

ಕಾಂಗ್ರೆಸ್ ಬರೇ ಘೊಷಣೆ ಮೂಲಕ ಅಧಿಕಾರ ನಡೆಸಲು ಸಾಧ್ಯವಿಲ್ಲ. ಈಗ 21ಶತಮಾನದಲ್ಲಿ ಯುವಕರು ಎಲ್ಲವನ್ನೂ ಗಮನಿಸುತ್ತಾರೆ‌. ಕಾಂಗ್ರೆಸ್ ಕೇವಲ ಘೋಷಣೆ ಮಾಡುವುದರಿಂದ ಜನರ ಮನಸ್ಸು ಗೆಲ್ಲಲು ಸಾಧ್ಯವಿಲ್ಲ‌. ಕಾಂಗ್ರೆಸ್ ಸಾಮಾನ್ಯರ ಭಾವನೆ ಅರ್ಥ ಮಾಡಿಕೊಳ್ಳಬೇಕು.

ದೆಹಲಿ ಒಂದು ನಗರದ ರಾಜ್ಯ, ಹೊರ ವಲಯದಲ್ಲಿರುವ ರೈತರು, ಹರಿಯಾಣದ ಜಾಟರು, ಪಂಜಾಬಿನ ಜನರು, ಉತ್ತರ ಪ್ರದೇಶ, ಬಿಹಾರದಿಂದ ಬಂದಿರುವ ದುಡಿಯುವ ವರ್ಗ, ಹಲವಾರು ಅಲ್ಪ ಸಂಖ್ಯಾತ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ರಾಷ್ಟ್ರೀಯ ತೆ ನಂಬಿರುವ ಅಲ್ಪ ಸಂಖ್ಯಾತರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

ಈ ಚುನಾವಣೆಯ ಒಟ್ಟು ಪರಿಣಾಮ ಹರಿಯಾಣ ಮಹಾರಾಷ್ಟ್ರ, ದೆಹಲಿ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯನ್ನು ಶಕ್ತಿಯುತವಾಗಿ ಮಾಡಿರುವುದು, ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗಲಿದೆ. ಆಪ್ ನವರು ತಮ್ಮನ್ನು ಸೋಲಿಸಲು ಕಾಂಗ್ರೆಸ್ ಪ್ರಯತ್ನ ಪಟ್ಟಿತ್ತು ಅಂತ ಮಾತನಾಡುತ್ತಿದ್ದಾರೆ. ಇದನ್ನು ನೋಡಿದರೆ ಇಂಡಿ ಒಕ್ಕೂಟದಲ್ಲಿ ಇನ್ನಷ್ಟು ಗೊಂದಲ ಸೃಷ್ಟಿಯಾಗುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss