- Advertisement -
Gadag News: ಗದಗ: ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಮತ್ತೆ ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ- ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ.
ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಡ್ಢಿ ದಂಧೆಕೋರರ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.
ಪೊಲೀಸರು 12 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, ಗೋಣಿ ಚೀಲದಲ್ಲ, ಹಿಟ್ಟಿನ ಡಬ್ಬಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ಕಂತೆ ಕಂತೆ ಹಣಗಳನ್ನು ನೋಡಿ ಪೊಲೀಸರು ಶಾಕ್ ಆಗಿದ್ದಾರೆ.
- Advertisement -