- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್ ಹೊರಟ್ಟಿ ಚಾಲನೆ ನೀಡಿದರು.
ಸಂಸದ ಕ್ರೀಡಾ ಹಾಗೂ ಸಾಂಸ್ಕೃತಿಕ ಮಹೋತ್ವದ ಅಂಗವಾಗಿ ಗಾಳಿಪಟ ಉತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ , ಎಂಎಲ್ ಸಿ ಪ್ರದೀಪ್ ಶೆಟ್ಟರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಇನ್ನು ಇದು ಅಂತರಾಷ್ಟ್ರೀಯ ಗಾಳಿಪಟ ಉತ್ಸವವಾಗಿರುವ ಹಿನ್ನೆಲೆ ಕ್ರೀಡಾಪಟುಗಳು ದೇಶ ವಿದೇಶಗಳಿಂದ ಆಗಮಿಸಿದ್ದರು. ಕಾರ್ಯಕ್ರಮ ಹಿನ್ನೆಲೆ ಶಾಲಾ ಮಕ್ಕಳಿಗೆ ವಿವಿಧ ಕ್ರೀಡಾ ಚಟುವಟಿಕೆಗಳ ಆಯೋಜನೆ ಮಾಡಲಾಗಿದೆ.
- Advertisement -