Political News: ಹೃದಯ ಸಂಬಂಧಿ ಕಾಯಿಲೆಯಿಂದ ಶಾಸಕ ರಾಜು ಕಾಗೆ ಪುತ್ರಿ ನಿಧನ

Political News: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಇಂದು ವಿಧಿವಶರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ. ನಾಳೆ ರಾಜು ಕಾಗೆ ಅವರ ಸ್ವಗ್ರಾಮ ಉಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ತಿಳಿದುಬಂದಿದೆ.

About The Author