Hubli News: ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ

Hubli News: ತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಅಬಕಾರಿ ಎಸ್.ಪಿ ವಿಜಯಕುಮಾರ್ ಹಿರೇಮಠ ನೇತೃತ್ವದಲ್ಲಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author