Horoscope: ಈ ಬಾರಿಯ ಯುಗಾದಿ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿಗಳಾದ ವೇಣುಗೋಪಾಲ ಶರ್ಮ ಅವರು ಹೇಳಿದ್ದು, 12 ರಾಶಿಗಳ ಫಲಾಫಲ ಹೇಗಿದೆ ಎಂದು ವಿವರಿಸಿದ್ದಾರೆ. ಅದರಲ್ಲಿ ಸಿಂಹ ರಾಶಿಯವರಿಗೆ ಈ ವರ್ಷ ಹೇಗಿರಲಿದೆ. ಅವರ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿದೆ ಅಂತಾ ತಿಳಿಯೋಣ ಬನ್ನಿ.
ಸಿಂಹ ರಾಶಿಯವರು ವಿವಾಹ ಮಾಡಿಕೊಳ್ಳುವ ಮುನ್ನ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಈ ವರ್ಷ ಸಿಂಹ ರಾಶಿಯವರಿಗೆ ವಿವಾಹದಿಂದ ಮೋಸವಾಗುವ ಸಾಧ್ಯತೆ ಇದೆ. ಹಾಗಾಗಿ ಮದುವೆ ಮಾಡಿಕೊಳ್ಳುವಾಗ ಎಚ್ಚರಿಕೆಯಿಂದ ಇರುವುದು ಉತ್ತಮ.
ಇನ್ನು ಆರೋಗ್ಯದ ಬಗ್ಗೆ ಹೇಳುವುದಾದರೆ, ಪಾದಗಳಲ್ಲಿ ಅಲರ್ಜಿಯುಂಟಾಗುತ್ತದೆ. ಇನ್ನು ವಾಹನ ಸಂಚಾರ ಮಾಡುವಾಗಲೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಮೇ ತ್ತು ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚು ಎಚ್ಚರಿಕೆ ವಹಿಸಿ. ಅಷ್ಟಮ ಶನಿ ಇರುವ ಕಾರಣ, ಅಪಘಾತವಾಗುವ ಸಾಧ್ಯತೆ ಇರುತ್ತದೆ.
ನೀರಿರುವ ಸ್ಥಳ, ನದಿಗಳ ಬಳಿ ಹೋಗುವಾಗ ಎಚ್ಚರಿಕೆಯಿಂದ ಇರಿ. ಶುಕ್ರವಾರದ ದಿನ ರಾಹುಕಾಲದಲ್ಲಿ ದುರ್ಗಾದೇವಿ ದರ್ಶನ ಮಾಡಿ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ವೀಡಿಯೋ ನೋಡಿ.




